ಪಿಎಫ್ ಪ್ರತಿಭಟನೆ: ರಣರಂಗವಾದ ಬೆಂಗಳೂರು: ಪಿಎಫ್ ನೀತಿ ವಿರೋಧಿಸಿ ನಡೆದ ಪ್ರತಿಭಟನೆ ಮಂಗಳವಾರ ಧ್ವಂಸಾರೂಪ ಪಡೆದಿದೆ. ಜಾಲಹಳ್ಳಿ ಕ್ರಾಸ್ ಬಳಿ ಎರಡು ಬಸ್ ಬೆಂಕಿಗೆ ಆಹುತಿಯಾಗಿವೆ. ಹೆಬ್ಬಗೋಡಿ ಠಾಣೆ ಆವರಣದಲ್ಲಿ ನಿಲ್ಲಿಸಿದ್ದ ಜಪ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಭಸ್ಮವಾಗಿವೆ. ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ತಡೆಯಲು ಅಶ್ರುವಾಯು ಪ್ರಯೋಗಿದ್ದಾರೆ. 10 ಮಂದಿಯನ್ನು ಬಂಧಿಸಲಾಗಿದೆ.
No comments:
Post a Comment